ಶಿವಮೊಗ್ಗ : ಭದ್ರಾವತಿ ನಗರದ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯ ಬೀರುವಿನಲ್ಲಿದ್ದ 95 ಗ್ರಾಂ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರನ್ನು ಪೇಟರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 7.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ ನಿವಾಸಿ ಆರ್.ಮಂಜುಳಾ(21) ಮತ್ತು ಸುಜೈನ್ ಖಾನ್ (24 ) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಇದೇ ತಿಂಗಳ 18 ರಂದು ನಗರದ ಪೇಪರ್ ಟೌನ್ ನ ಚಂದ್ರಮ್ಮ ಎಂಬುವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಆರೋಪಿಗಳನ್ನ ಪತ್ತೆ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಸಿಪಿಐ ನಾಗಮ್ಮ ನೇತೃತ್ವದಲ್ಲಿ ತಂಡ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದೆ.