ಸಂಘರ್ಷದಿಂದ ತತ್ತರಿಸುತ್ತಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ಸಂಪರ್ಕದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ 10ರಂದು ಬೆಳಿಗ್ಗೆ 10 ಗಂಟೆಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ನೇಪಾಳದಲ್ಲಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ.ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ' ಎಂದಿದ್ದಾರೆ.