ನಗರದ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ (ಓಪೆಕ್) ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಸೆ.10ರ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ 12.45ರ ಸುಮಾರಿಗೆ ಆಸ್ಪತ್ರೆಗೆ ಪ್ರವೇಶಿಸಿದ ನ್ಯಾಯಾಧೀಶರು, ಆಸ್ಪತ್ರೆಯಲ್ಲಿನ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಮಾತನಾಡಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ಪ್ರವೇಶದ ವೇಳೆ, ಆಸ್ಪತ್ರೆಯ ಹೊರಾಂಗಣದಲ್ಲಿ ಕುಳಿತಿದ್ದ ರೋಗಿಯೊಬ್ಬರನ್ನು ನ್ಯಾಯಾಧೀಶರು ಮಾತನಾಡಿಸಿದರು. ಆಸ್ಪತ್ರೆಯ ಬಾಗಿಲು ಬಳಿ ಮಲಗಿದ್ದ ಮಹಿಳಾ ರೋಗಿಯೊಬ್ಬರಿಗೆ ವಿಚಾರಿಸಿದಾಗ, ವೈದ್ಯರಿಗಾಗಿ ಕಾಯುತ್ತಿ