ಜೋಯಿಡಾ : ಮನೆ ಗಣಪತಿಯ ವಿಸರ್ಜನೆಯ ಸಂದರ್ಭದಲ್ಲಿ 14 ಜನರ ತಂಡ ಒಂದು ಏಕಏಕಿ ಹಲ್ಲೆ ನಡೆಸಿ, ಗಂಭೀರ ಗಾಯಗೊಳಿಸಿದ ಘಟನೆ ತಾಲೂಕಿನ ವೈಜಗಾಂವ್'ನಲ್ಲಿ ಗುರುವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಶುಕ್ರವಾರ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಗಾಯಗೊಂಡು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶುಕ್ರವಾರ ಸಂಜೆ 7:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ. ಈ ಘಟನೆಯ ಕುರಿತಂತೆ ವೈಜಗಾಂವ್ ನಿವಾಸಿ ಪ್ರತಿಜ್ಞಾ ಪ್ರೇಮಾನಂದ ಸಾವಂತ್ ಅವರು ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.