ಜಿಲ್ಲೆಯ ಎಲ್ಲಾ ಹೋಟೆಲ್ ಗಳು, ರೆಸ್ಟೋರೆಂಟ್ ಗಳು, ಬೇಕರಿಗಳು, ಕೇಟರರ್ಸ್ ಹಾಗೂ ಬೀದಿಬದಿ ಆಹಾರ ಉದ್ದಿಮೆದಾರರು ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ವತಿಯಿಂದ ನೋಂದಣಿ, ವ್ಯಾಪಾರ ಪರವಾನಗಿ ಹಾಗೂ ಟ್ರೇಡ್ ಪಡೆಯುವುದು ಕಡ್ಡಾಯವಾಗಿರುತ್ತದೆ ಹಾಗೂ ಕಾಲಕಾಲಕ್ಕೆ ನವೀಕರಣ ಮಾಡಿಕೊಳ್ಳಬೇಕು. ತಪ್ಪಿದಲ್ಲಿ FSSAI ಕಾಯ್ದೆ 2006 ಪ್ರಕಾರ ದಂಡ ವಿಧಿಸಲಾಗುವುದು. ಹೋಟೆಲ್ ಉದ್ದಿಮೆದಾರರು ಹೋಟೆಲ್‌ನ ಒಳಗೆ, ಹೊರಗೆ ಮತ್ತು ಶೌಚಾಲಯಗಳಲ್ಲಿ ಶುಚಿತ್ವವನ್ನು ಕಾಪಾಡುವ ವ್ಯವಸ್ಥೆಯ ಕುರಿತು ನಿರಂತರವಾಗಿ ನಿಗಾ ವಹಿಸಬೇಕು. ಅಡುಗೆ ಕೋಣೆಯಲ್ಲಿ ಕೆಲಸ ಮಾಡುವವರು, ಆಹಾರ ತಯಾರಕರು ಕಡ್ಡಾಯವಾಗಿ ತಲೆಗೆ ಕ್ಯಾಪ್, ಕೈಗೆ ಗ್ಲೌಸ್, ಮಾಸ್ಕ್ ಧರಿಸಬೇಕು. ಆಹಾರದಲ್ಲಿ ಯಾವುದೇ ಕೃತಕ ಬಣ್ಣಗಳು ಹಾ