ಕೊಳ್ಳೇಗಾಲ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಆಂಬುಲೆನ್ಸ್ ಸಹಾಯದಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರತಂದು ದಾಖಲು ಮಾಡಿ ಚಿಕಿತ್ಸೆ ಕೊಡಿಸದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ 50ರಿಂದ 60 ವರ್ಷ ವಯಸ್ಸಾಗಿದ್ದು ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.