ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ಸೆಪ್ಟೆಂಬರ್ 12ರಂದು ಸಂಜೆ 4 ಗಂಟೆಗೆ ನಗರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿದ್ದ ಪೌರ ಕಾರ್ಮಿಕರ 2992 ಹುದ್ದೆಗಳ ಪೈಕಿ 492 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಇನ್ನುಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.