ಶನಿವಾರ ಮಧ್ಯಾಹ್ನ 1ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಮುದಾಯ ಮುಖಂಡರೊಂದಿಗೆ ಸೌಹಾರ್ದ ಸಭೆಯ ಅಧ್ಯಕ್ಷತೆನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಆಗಸ್ಟ್ 27 ರಂದು ಆಚರಿಸುವ ಗಣೇಶ ಚತುರ್ಥಿ ಹಬ್ಬ ಮತ್ತು ಸೆಪ್ಟಂಬರ್ 5 ರ ಈದ್ ಮಿಲಾದ್ ಆಚರಣೆಯನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಣೆ ಮಾಡುವಂತೆ ತಿಳಿಸಿದರು. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಾಗ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು, ಪೆಂಡಾಲ್ ಗಳ ನಿರ್ಮಾಣ ಮತ್ತು ಅಲಂಕಾರದಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್ ಹಾಗೂ ಇನ್ನಿತರರು ಇದ್ದರು.