ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಸಲಾಯಿತು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಚಾಲನೆ ನೀಡಿದರು. ಈ ವೇಳೆ ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನಾ ಎಂಬ ವಿಚಾರದ ಕುರಿತು ಹಲವು ಗಣ್ಯರು ವಿಷಯ ಮಂಡಿಸಿದರು. ಈ ವೇಳೆ ಹಿರಿಯ ಪತ್ರಕರ್ತರಾದ ಡಿ.ಉಮಾಪತಿ, ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಅಯೇಶಾ ಖಾನಂ ಸೇರಿ ಹಲವರಿದ್ದರು