ಪಿ.ಒ.ಪಿ ಗಣೇಶ ಮೂರ್ತಿಗೆ ಹಾಗೂ ಡಿ.ಜೆ. ಬಳಕೆಗೆ ಅವಕಾಶವಿಲ್ಲ ಎನ್ನುವ ಕಾರಣಕ್ಕೆ ರವಿವಾರ ಸಂಜೆ 4ಕ್ಕೆ ನಗರದ ವಿವಿಧ ಕಡೆಗಳಲ್ಲಿ ಪರಿಸರ ಇಲಾಖೆಯ ಅಧಿಕಾರಿಗಳು ಗಣೇಶನ ವಿಗ್ರಹ ತಯಾರಿಸುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಗಣೇಶನ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ , ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಂತೆ ಹಾಗೂ ಡಿ. ಜೆ. ಯನ್ನು ಬಳಸದಂತೆ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.