ಇನ್ನು ಮುಂದೆ ಮಲೆನಾಡಿನ ಭಾಗದಲ್ಲಿ ಸಾಕು ಹಸುಗಳನ್ನು ರಸ್ತೆ ಹಾಗೂ ಬೀದಿಗಳಲ್ಲಿ ಬಿಟ್ಟು ಹೋದರೆ ಅಂಥವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಮಧ್ಯಾನ ಎರಡು ಗಂಟೆ ಸುಮಾರಿಗೆ ಚಿಕ್ಕಮಗಳೂರು ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಇತ್ತೀಚಿನ ದಿನಗಳಲ್ಲಿ ಮಲೆನಾಡು ಗಿಡ್ಡ ಹಸುಗಳ ಕಳ್ಳತನ ಹೆಚ್ಚಾಗುತ್ತಿದೆ. ಹಾಗೂ ಹಸುಗಳು ರಸ್ತೆಯಲ್ಲಿ ಮಲಗುವ ಅಥವಾ ಓಡಾಡುವ ಕಾರಣಗಳಿಂದಾಗಿ ಅಪಘಾತಗಳ ಸಂಖ್ಯೆಯು ಹೆಚ್ಚಾಗುತ್ತದೆ. ಈ ಎಲ್ಲಾ ಸಮಸ್ಯೆಗಳಿಗೆ ಕಡಿಬಾಣ ಹಾಕಲು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಬೀಡ