ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಪರವಾಗಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಹೋಗಲು ರಸ್ತೆ ಸಮಸ್ಯೆ ಇದ್ದು ರಸ್ತೆ ನಿರ್ಮಿಸಿ ಕೊಡುವಂತೆ ವಸತಿ ನೆಲದ ವಿದ್ಯಾರ್ಥಿನಿಯರು ಸರ್ಕಾರಕ್ಕೆ ವಿನಂತಿಸಿದ್ದಾರೆ. ಬುಧವಾರ ಮಧ್ಯಾಹ್ನ ಈ ಕುರಿತು ವಿದ್ಯಾರ್ಥಿನಿಯರು ಹೇಳಿಕೆ ನೀಡಿ, ಮಳೆ ಬಂದರೆ ಸಾಕು ಈ ರಸ್ತೆಯಲ್ಲಿ ಹೋಗಲು ಸಾಧ್ಯವಾಗದಂತಾಗಿದೆ, ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗುತ್ತಿಲ್ಲ ಆದ್ದರಿಂದ ಸರ್ಕಾರ ಈಗಲಾದರೂ ವಸತಿ ನಿಲಯಕ್ಕೆ ಹೋಗಲು ಸುಸಜ್ಜಿತ ರಸ್ತೆ ನಿರ್ಮಿಸಿ ಕೊಡಬೇಕು ಎಂದು ವಿನಂತಿಸಿದ್ದಾರೆ.