ಸೆಪ್ಟೆಂಬರ್ 8, ಸೋಮವಾರ ಮಧ್ಯಾಹ್ನ 2 ಗಂಟೆಗೆ, ಕುರುಗೋಡು ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಭೂಮಿ ಪೂಜೆಯನ್ನು ನೆರವೇರಿಸಿದರು.ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಕಾಮಗಾರಿಗಳ ಅಂಗವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಸ ಕೊಠಡಿ ನಿರ್ಮಾಣ ಕಾರ್ಯವೂ ಆರಂಭಗೊಳ್ಳಲಿದೆ