ಕೊಳ್ಳೇಗಾಲ: ತಾಲ್ಲೂಕಿನ ಹರಳೆ ಗ್ರಾಮದ ನಿವಾಸಿಯೋರ್ವ ದಿಡೀರನೆ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹದೇವ್ ರವರು ಮನೆಯಲ್ಲೇ ಮಲಗಿದ್ದ ಸಂದರ್ಭದಲ್ಲಿ ಎದ್ದು ಹೋಗಿದ್ದು, ಬಳಿಕ ಮನೆಗೆ ಮರಳಿಲ್ಲ. ಸಂಬಂಧಿಕರು ಮತ್ತು ನೆರೆಹೊರೆಯವರು ಎಲ್ಲೆಡೆ ಹುಡುಕಿದರೂ ಸುಳಿವು ಸಿಗದ ಕಾರಣ, ಮಗ ಪ್ರೇಮ್ ಕುಮಾರ್ ಅವರು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ಶನಿವಾರ ಮದಾಹ್ನ 1ರಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನಾಪತ್ತೆಯಾದ ವ್ಯಕ್ತಿಯ ಪತ್ತೆಗೆ ತಕ್ಷಣ ಕ್ರಮ ಕೈಗೊಂಡಿದ್ದಾರೆ.