ವಕೀಲರು ರೈತರ ದಿಕ್ಕು ತಪ್ಪಿಸುತ್ತಿದ್ದಾರೆ ಎಂಬ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ, ಮಂಗಳವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನ್ಯಾಯವಾದಿಗಳ ಬಗ್ಗೆ ಹಗುರವಾಗಿ ಮಾತನಾಡಿದ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಕೂಡಲೇ ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕು ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಕೋರ್ಟ್ ಕಣಪ್ಪ ಬಹಿಷ್ಕರಿಸಿ ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.