ಮಲೆನಾಡು ಶಿವಮೊಗ್ಗದಲ್ಲಿ ಮಳೆಯ ಅಬ್ಬರದ ನಡುವೆಯೂ ಕೂಡ ಗಣೇಶೋತ್ಸವವನ್ನು ಸಂಭ್ರಮಾಚರಣೆ ಆಚರಿಸಲಾಗುತ್ತಿದೆ.ಗುರುವಾರ ಶಿವಮೊಗ್ಗದ ಕೋಟೆ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ವೀರ ಸಾವರ್ಕರ್ ಹಿಂದೂ ಸಂಘಟನಾ ಮಹಾಮಂಡಲಿ ವತಿಯಿಂದ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಯಿತು ಪ್ರತಿಷ್ಠಾಪನೆಗೂ ಮುನ್ನ ಶಿವಮೊಗ್ಗ ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ಮೂರ್ತಿಯನ್ನು ಮೆರವಣಿಗೆ ಮೂಲಕ ಮಂಗಳವಾದ್ಯಗಳ ಜೊತೆಯಲ್ಲಿ ಕರೆತಂದು ಪ್ರತಿಷ್ಠಾಪಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.