ಹಾಸನ: ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಂಜೂರಾಗಿರುವ ಮನೆಗಳಲ್ಲಿ ಭಾರಿ ಅವ್ಯವಹಾರ ನಡೆದಿದ್ದು ಈ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ, ಲೋಪ ಎಸಗಿರುವ ಅಧಿಕಾರಿಗಳು ಯಾರೇ ಆಗಿದ್ದರೂ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದರು.ಹಾಸನ ಜಿಲ್ಲೆಯ ಅರಸೀಕೆರೆ ಹಾಗೂ ಸಕಲೇಶಪುರ ಭಾಗದಲ್ಲಿ ಮನೆ ಮಂಜೂರು ಪ್ರಕ್ರಿಯೆಯಲ್ಲಿ ಪಿಡಿಒ, ಇಒ, ಪಿಡಿ ಮತ್ತು ಮುಖ್ಯ ಲೆಕ್ಕಾಧಿಕಾರಿಗಳು ಶಾಮೀಲಾಗಿ ಅರ್ಹ ಫಲಾನುಭವಿಗಳಿಗೆ ನೀಡಬೇಕಾದ ಮನೆಗಳನ್ನು ಇತರರ ದಾಖಲಾತಿ ಬಳಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಲಾಗಿದೆ ಎಂಬ ಬಗ್ಗೆ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.