ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದಲ್ಲಿ ಶ್ರೀ ಚನ್ನಬಸವೇಶ್ವರ ಮಹಾರಾಜರ 39ನೇ ಪುಣ್ಯಸ್ಮರಣ ಕಾರ್ಯಕ್ರಮವನ್ನು ಭಾನುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಚನ್ನಬಸವೇಶ್ವರ ಶ್ರೀಗಳು ಈ ಭಾಗದಲ್ಲಿ ಭಕ್ತಾದಿಗಳಲ್ಲಿ ಆಧ್ಯಾತ್ಮಿಕತೆ ಜ್ಞಾನ ನೀಡಿದವರು ಅಂಥವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಜೀವನ ನಡೆಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸಾರ್ವಜನಿಕರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು.