ಮೊಳಕಾಲ್ಮುರು:-ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಎನ್ ವೈ ಪಿ ಚೇತನ್ ಮಾತನಾಡಿ,ತಾಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿಗಳು ಸರ್ಕಾರದ ಮಹಾತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಎಂದರು.