ಕಲಬುರಗಿ : ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಬಾರದಿರಲೆಂದು ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಆಲ್ಲೂರ ಗ್ರಾಮದಲ್ಲಿ ಜಾನುವಾರುಗಳಿಗೆ ಪೂಜೆ ನೆರವೇರಿಸಲಾಗಿದೆ.. ಆ24 ರಂದು ಬೆಳಗ್ಗೆ 11.30 ಕ್ಕೆ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಜಾನುವಾರುಗಳಿಗೆ ಬಣ್ಣಬಣ್ಣಗಳಿಂದ ಅಲಂಕಾರ, ಪೂಜೆ ಮಾಡಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿ ನೈವೇದ್ಯ ಅರ್ಪಿಸಿ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗಗಳು ಬಾರದಿರಲಿ ಅಂತಾ ದೇವರಲ್ಲಿ ಪ್ರಾರ್ಥಿಸಿದ್ದಾರೆ.