ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ, ವಿರೇಂದ್ರ ಹೆಗ್ಡೆ ಮತ್ತು ಕುಟುಂಬದ ವಿರುದ್ಧ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಾರಾ ಮಹೇಶ್ ಆರೋಪ ಮಾಡಿದರು, ಅನಗತ್ಯವಾಗಿ ಮತ್ತು ಅನಾವಶ್ಯಕವಾಗಿ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡಲಾಗುತ್ತಿದೆ, ಈಗ ಸದ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ, ಸದ್ಯ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೆ ಸತ್ಯಾಸತ್ಯತೆ ಹೊರಬೀಳಲಿದ್ದು ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು, ಮೈಸೂರಿನಿಂದ ಧರ್ಮಸ್ಥಳಕ್ಕೆ ನೂರಾರು ಕಾರ್ ಗಳಲ್ಲಿ ಹೊರಟ ಧರ್ಮಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಾರಾ ಮಹೇಶ್, ಸಾರ್ವಜನಿಕರು ಮತ್ತು ಕೆಲವು ರಾಜಕಾರಣಿಗಳು ತಪ್ಪು ಮಾಡಿದಾಗ ಆಣೆ ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಹೋಗೋಣ ಎನ್ನುತ್ತಿದ್ದರು,