ವಿಜಯನಗರದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಗುರುವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶಿ ಬಬಲೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸರಿಯಾದ ಆಹಾರವನ್ನು ಪೂರೈಸಬೇಕು, ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗುಣಮಟ್ಟದ ಪೌಷ್ಟಿಕ ಆಹಾರ ವಿತರಿಸಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ವಿದ್ಯಾರ್ಥಿಗಳು ಶಿಕ್ಷಕರು ಉಪಸ್ಥಿತರಿದ್ದರು.