ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಮೈಸೂರು ಊಟಿ ರಸ್ತೆಯಲ್ಲಿರುವ ತಾಜ್ ಕಾರ್ ಗ್ಯಾರೇಜ್ ನ ಕಾರ್ಮಿಕ ಅಬ್ದುಲ್ ಖಾಲಿಕ್ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ