ಗಣಪತಿ ವಿಸರ್ಜನೆ ವೇಳೆ ನಿಯಮ ಮೀರಿ ಡಿಜೆ ಹಾಕಿದ್ದಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ರಾತ್ರಿ 9 ಗಂಟೆ ವೇಳೆ ಡಿಜೆ ಸೀಜ್ ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ತಾಲ್ಲೂಕಿನ ಜಿಆರ್ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ನೇಹಬಳಗದ ವತಿಯಿಂದ ಗ್ರಾಮದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ವೇಳೆ ಶಬ್ದ ಮಾಲಿನ್ಯ ಉಂಟು ಮಾಡುವ ಹಾಗೂ ಸಾರ್ವಜನಿಕರಿಗೆ ಕಿರಿ ಕಿರಿ ಉಂಟು ಮಾಡುವಂತಿದ್ದು, ಇದರಿಂದ ನಿಯಮ ನೀರಿ ಡಿಜೆ ಹಾಕಿದ್ದರಿಂದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಜೆ ಮಾಲೀಕರಾದ ತಿಪ್ಪೇಸ್ವಾಮಿ ಹಾಗೂ ಆಪರೇಟರ್ ಶಿವಪ್ರಸಾದ್ ಸೇರಿ 11 ಮಂದಿ ವಿರುದ್ದ ಕೇಸ್ ದಾಖಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ