ಯಾದಗಿರಿ ನಗರದಿಂದ ಸೇಡಂ ಹೋಗುವ ರಸ್ತೆ ಸಂಪೂರ್ಣ ಹಾಳಾಗಿ ತಗ್ಗು ಗುಂಡಿಗಳಿಂದ ವಾಹನ ಸವಾರರು ನಿತ್ಯ ಪರದಾಡುವಂತಾಗಿತ್ತು. ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ನೇತ್ರತ್ವದಲ್ಲಿ ಕಳೆದ ಮೂರು ದಿನಗಳ ಹಿಂದೆ ರಸ್ತೆಯಲ್ಲಿನ ಗುಂಡಿಯಲ್ಲಿ ಮಲಗಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗೆ ಎಚ್ಚೆತ್ತ ಲೋಕೋಪಯೋಗಿ ಇಲಾಖೆ ಬುಧವಾರ ರಸ್ತೆ ಗುಂಡಿಗಳ ಮುಚ್ಚುವ ಕಾರ್ಯ ಆರಂಭಿಸಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಕುರಿತು ಉಮೇಶ್ ಮುದ್ನಾಳ್ ಹಾಗೂ ಇತರರು ಮಾತನಾಡಿ ಗುಂಡಿಗಳನ್ನು ಮುರಂ ಹಾಕಿ ಮುಚ್ಚಿದರೆ ಸಾಲದು ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.