ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ, ಕಂದಕೂರು ಅವರು ರಾಜೂರು ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ದಿಢೀರ್ ಭೇಟಿ ನೀಡಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಶೀಲಿಸಿದರು. ಶಾಲೆಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವಂತೆ ಶಿಕ್ಷಕರಿಗೆ ತಾಕೀತು ಮಾಡಿದರು. ರಾಜೂರು ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಇಒ ಅವರು, 7 ನೇ ತರಗತಿಯ ಮಕ್ಕಳಿಗೆ ಗಣಿತ ವಿಷಯದ ಸಂಕಲನ, ವ್ಯವಕಲನ, ಸರಳೀಕರಣ ಮತ್ತು ಏಕೀಕರಣ ಕುರಿತು ಪಾಠ ಬೋಧನೆ ಮಾಡಿದರು.