ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ 2024-25 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿಯಲ್ಲಿ ವಿಶೇಷ ಚೇತನರಿಗೆ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ವಾಹನಗಳನ್ನು ವಿತರಿಸಿದರು. ಸಮಾಜದ ಅವಿಭಾಜ್ಯ ಅಂಗವಾಗಿರುವ ವಿಶೇಷ ಚೇತನರ ಜೀವನದಲ್ಲಿ ಗೌರವ ಮತ್ತು ಆತ್ಮ ವಿಶ್ವಾಸವನ್ನು ವೃದ್ಧಿಸುವ ಮತ್ತು ಸ್ವಾವಲಂಬನೆಯ ಶಕ್ತಿ ತುಂಬುವ ಕರ್ತವ್ಯವನ್ನು ನಾವೆಲ್ಲರೂ ನಿರ್ವಹಿಸೋಣ ಎಂದರು.ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ ಪ್ರಮುಖರಾದ ಸಿದ್ದು ಮೊಗಲಿಶೆಟ್ಟರ್, ರವಿ ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.