ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣರನ್ನು ವಜಾಗೊಳಿಸಿದ್ದನ್ನ ಖಂಡಿಸಿ ಕೊರಟಗೆರೆಯಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಯಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸಿದರು. ಸಹಸ್ರಾರು ಜನರು ರಾಜಣ್ಣ ಅವರ ಭಾವಚಿತ್ರ ಹಿಡಿದು “ನ್ಯಾಯ ಬೇಕು” ಎಂದು ಘೋಷಣೆ ಕೂಗಿ ಮೆರವಣಿಗೆ ನಡೆಸಿದರು. ಎಸ್‌ಆರ್‌ಎಸ್ ಸರ್ಕಲ್‌ನಿಂದ ತಹಸಿಲ್ದಾರ್ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ರಾಜ್ಯಪಾಲ ಹಾಗೂ ಮುಖ್ಯಮಂತ್ರಿ ಅವರಿಗೆ ತಹಸಿಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಯಿತು. ಕೂಡಲೇ ಸಚಿವ ಸ್ಥಾನ ನೀಡಬೇಕು, ಇಲ್ಲವಾದರೆ ಉಗ್ರ ಹೋರಾಟ ಎಚ್ಚರಿಕೆ ನೀಡಿದರು....