ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ವಿಧಾನಸಭಾ ವ್ಯಾಪ್ತಿಯ ಅಣಜಿಗೆರೆ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆದಿದೆ. ದಾವಣಗೆರೆಯಿಂದ ಉಚ್ಚಂಗಿದುರ್ಗ, ಮಾದಿಹಳ್ಳಿ ಮಾರ್ಗವಾಗಿ 28 ಜನ ಪ್ರಯಾಣಿಕರನ್ನು ತುಂಬಿಕೊAಡು ಹರಪನಹಳ್ಳಿ ಕಡೆ ಹೊರಟ್ಟಿದ್ದ ಬನಶಂಕರಿ ಖಾಸಗಿ ಬಸ್ ಅಣಜಿಗೆರೆ ಬಳಿಯಿರುವ ಸೇತುವೆಯ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇನ್ನು ಗಂಭೀರ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.