ರಾಯಚೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಲೋಡ್ ಶೆಡ್ಡಿಂಗ್ ಹೆಸರಲ್ಲಿ ಅನಗತ್ಯವಾಗಿ ವಿದ್ಯುತ್ ಕಡಿತ ಮಾಡುವ ಮೂಲಕ ರಾಯಚೂರು ಜೆಸ್ಕಾಂ ಇಲ್ಲಿನ ಗ್ರಾಹಕರಿಗೆ ತೊಂದರೆ ಕೊಡುತ್ತಿದೆ. ಇಡೀ ರಾಜ್ಯಕ್ಕೆ ಬೆಳಕು ನೀಡುವ ಆರ್ಟಿಪಿಎಸ್ ಮತ್ತು ವೈಟಿಪಿಎಸ್ ಘಟಕಗಳು ರಾಯಚೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಇಲ್ಲಿನ ಜನರಿಗೆ ಕರೆಂಟ್ ಇಲ್ಲವೆಂಬುದು ವಿಪರ್ಯಾಸ. ಕೂಡಲೇ ರಾಯಚೂರು ಜಿಲ್ಲೆಗೆ 24 ತಾಸುಗಳ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಪದಾಧಿಕಾರಿಗಳು ಜೂನ್ 17 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಡಳಿತದ ಮೂಲಕ ಇಂಧನ ಸಚಿವರಿಗೆ ಮನವಿ ಪತ್ರ ರವಾನಿಸಿದರು