ಹಾವೇತಿ ಜಿಲ್ಲೆಯಾದ್ಯಂತ ವಿಜಯದಶಮಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಹಾವೇರಿಯ ನವದುರ್ಗೆಯರ ದೇವಸ್ಥಾನ ಪುಷ್ಪಗಳಿಂದ ಕಂಗೊಳಿಸುತ್ತಿದೆ. ನವರಾತ್ರಿಯ ಒಂದೊಂದು ದಿನ ಒಂದೊಂದು ದೇವತೆಗೆ ಪೂಜೆ ಸಲ್ಲಿಸಿದರೆ. ವಿಜಯದಶಮಿಯ ದಿನ ಒಂಭತ್ತು ದುರ್ಗೆಯರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಈ ಅಲಂಕಾರ ಪೂಜೆ ಕಣ್ತುಂಬಿಕೊಳ್ಳಲು ಭಕ್ತರ ದಂಡೇ ಆಗಮಿಸುತ್ತದೆ.