ಧಾರವಾಡ ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ಜಿಲ್ಲೆಯ ವಿವಿಧ ತಾಲೂಕಿನ 34 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹುಬ್ಬಳ್ಳಿ 10, ಕುಂದಗೋಳನ 02, ಹುಬ್ಬಳ್ಳಿ ನಗರ 09, ಕಲಘಟಗಿ 07 ಮತ್ತು ನವಲಗುಂದ 06 ಮನೆಗಳಿಗೆ ಹಾನಿಯಾಗಿದೆ. ಹಾಗೂ ಯಾವುದೇ ಮಾನವ ಮತ್ತು ಜಾನುವಾರು ಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ ಎಂದು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.