ಹಾಸನ:; ಕುಡಿದ ಆಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಒಡೆದಾಡಿಕೊಂಡಿದ್ದು ಪರಸ್ಪರ ಬಾಟಲಿಯಿಂದ ಹೊಡೆದಾಡಿಕೊಂಡು ಇಬ್ಬರೂ ಗಂಬೀರವಾಗಿ ಗಾಯಗೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೋವಿನಕೆರೆ ಗ್ರಾಮದಲ್ಲಿ ನಡೆದಿದೆ.ಹಿರಿಸಾವೆ ಗ್ರಾಮ ಪಂಚಾಯಿತಿ ಪಿಡಿಒ ಸತೀಶ್ ಹಾಗೂ ಎಮ್ ಶಿವರ ಗ್ರಾಮ ಪಂಚಾಯಿತಿ ಪಿಡಿಒ ರಾಮಸ್ವಾಮಿ ಪರಸ್ಪರ ಹೊಡೆದಾಡಿಕೊಂಡಿದ್ದು ಜಗಳದ ವೇಳೆ ಸತೀಶ್ ತಲೆಗೆ ರಾಮಸ್ವಾಮಿ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸತೀಶ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸರ್ಕಾರಿ ನೌಕರರ ಸಂಘದ ಚುನಾವಣೆ ವಿಚಾರವಾಗಿ ಗೋವಿನಕೆರೆ ಗ್ರಾಮ ಪಂಚಾಯಿತಿ ಸದಸ್ಯನ ಮನೆಯಲ್ಲಿ ಪಿಡಿಒಗಳು ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆ ಆರಂಭವಾಗಿದೆ.