ರಾಯಚೂರು ನಗರದಲ್ಲಿ 605 ಎಲ್ಇಡಿ ಬೀದಿ ದೀಪಗಳ ಅಳವಡಿಕೆಗೆ ಚಾಲನೆ ನೀಡಲಾಗಿದೆ. ನಗರದ ಮಹಾನಗರ ಪಾಲಿಕೆಯ ಹಳೆ ಕಾರ್ಯಾಲಯದಲ್ಲಿ ಬುಧವಾರ ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ಸಚಿವ ಎನ್ ಎಸ್ ಬೋಸರಾಜು ಅವರು ಚಾಲನೆ ನೀಡಿದರು. 84 ಲಕ್ಷ 79 ಸಾವಿರ ರೂಪಾಯಿಗಳ ವೆಚ್ಚದಲ್ಲಿ 150 ವ್ಯಾಟ್ ಸಾಮರ್ಥ್ಯದ 65 ಎಲ್ ಇ ಡಿ ಸ್ಟ್ರೀಟ್ ಲೈಟ್ ಗಳನ್ನು ಅಳವಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.