ದಿನನಿತ್ಯವೂ ನಾವು ಸೇವಿಸುವ ಆಹಾರ ಪದ್ದತಿಯಲ್ಲಿ ಉತ್ತಮ ಗುಣಮಟ್ಟದ ಪದ್ಧತಿ ಅಳವಡಿಸಿಕೊಳ್ಳುವುದರ ಜೊತೆಗೆ ದಿನನಿತ್ಯವು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಹಾಗೂ ಅಡರಕಟ್ಟಿ ಗ್ರಾಮದಲ್ಲಿ ಉಚಿತ ತಪಾಸಣೆ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸಮುದಾಯ ಕೇಂದ್ರದ ವೈದ್ಯ ಶ್ರೀಕಾಂತ್ ಕಾಟೇವಾಲೆ ಹೇಳಿದರು. ಅವರು ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಮ್ಮಿಕೊಂಡ ಜಯಪ್ರೀಯ ಕಣ್ಣಿನ ಆಸ್ಪತ್ರೆ ಹಾಗೂ ವಿವೇಕಾನಂದ ಆಸ್ಪತ್ರೆ ಹುಬ್ಬಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.