ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಸಮಸ್ಯೆ ಇದ್ದು ಮಹಿಳೆಯೊಬ್ಬರು ಹೆರಿಗೆಗೆಂದು ಬಂದಾಗ ಕತ್ತಲಿನಲ್ಲಿ ಮೊಬೈಲ್ ಬೆಳಕು ಹಾಕಿ ಪರೀಕ್ಷಿಸಿರುವಂತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು,ಇದರ ಕುರಿತು ಶುಕ್ರವಾರ ಮಧ್ಯಾನ ರಾಯಚೂರ ನಗರದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುರೇಂದ್ರಬಾಬು ಅವರು ಹೇಳಿಕೆ ನೀಡಿ, ವೈರಲ್ ಆಗಿರುವ ವಿಡಿಯೋ ಹಳೆಯದಾಗಿದೆ ಮಳೆಗಾಲದ ಇದ್ದಿದ್ದರಿಂದ ವಿದ್ಯುತ್ ಕಡಿತಗೊಂಡಿತ್ತು, ಅಂತಹ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ವಿಡಿಯೋ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.