ಕಳೆದ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕ್ರಿಮಿನಲ್ ಕೇಸ್ ದಾಖಲಿಸಿದ್ದ ಪ್ರಕರಣವನ್ನು ರಾಜ್ಯ ಸರಕಾರ ಸಚಿವ ಸಂಪುಟ ಸಭೆಯಲ್ಲಿ ವಾಪಾಸ್ ಪಡೆದಿರುವುದು ಸ್ವಾಗತಾರ್ಹ ಎಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಪ್ರಸನ್ನ ಹಿರೇಮಠ ತಿಳಿಸಿದ್ದಾರೆ. 2023ರಲ್ಲಿ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿರುವುದುನ್ನು ಖಂಡಿಸಿ 2022 ಆ.18 ರಂದು ಹಾವೇರಿ ನಗರದಲ್ಲಿಯುವ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಸಹಿಸದ ಅಂದಿನ ಬಿಜೆಪಿ ಸರಕಾರ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕೇಸ್ ದಾಖಲು ಮಾಡಿತ್ತು.