ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಅಧಿಕಾರಿಗಳು ಲೂಟಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಕೊತ್ವಾಲಗಲ್ಲಿ, ನರಗುಂದಕರಬಾವಿ ಚೌಕ್ ಬಳಿ ಬೀದಿ ವ್ಯಾಪಾರಿಗಳಿಂದ ಬಾಡಿಗೆ ಪಡೆಯಲು ಅವಕಾಶವಿಲ್ಲದಿದ್ದರೂ ತೆರಿಗೆ ಹಣ ವಸೂಲಿ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು ಸೋಮವಾರ ಕಾಂಗ್ರೆಸ್ ಪಾಲಿಕೆ ಸದಸ್ಯರು ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ನಗರದ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ಬಡ ಬೀದಿ ವ್ಯಾಪಾರಿಗಳಿಂದ ಪಾಲಿಕೆ ಅಧಿಕಾರಿಗಳು ಹೆಚ್ಚುವರಿ ತೆರಿಗೆ ಸಂಗ್ರಹಿಸಿ ಲೂಟಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು