ಮಲೆನಾಡು ಶಿವಮೊಗ್ಗದಲ್ಲಿ ಮಳೆಯ ಬರಾ ಜೋರಾಗಿದೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆ ಶುಕ್ರವಾರ ಶಿವಮೊಗ್ಗ,ಶಿಕಾರಿಪುರ,ಸಾಗರ,ತೀರ್ಥಹಳ್ಳಿ, ಹೊಸನಗರ ಹಾಗೂ ಸೊರಬ ತಾಲೂಕಿನ ಎಲ್ಲಾ ಅಂಗನವಾಡಿಗಳು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.ಮಕ್ಕಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಆಯಾ ತಾಲೂಕಿನ ತಹಶೀಲ್ದಾರ್ ನಿಂದ ಆದೇಶಿಸಲಾಗಿದೆ. ಮುಂದಿನ ರಜೆ ದಿನದಲ್ಲಿ ತರಗತಿ ಸರಿದೂಗಿಸಿಕೊಳ್ಳಲು ಸೂಚನೆಯನ್ನು ಸಹ ನೀಡಲಾಗಿದೆ.