ಹಳಿಯಾಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳ ಪಟ್ಟಣದ ತಾಲೂಕು ಕ್ರೀಡಾಂಗಣ ಮತ್ತು ಕುಸ್ತಿ ಅಖಾಡಾದಲ್ಲಿ ಆಯೋಜಿಸಿದ ಬೆಳಗಾವಿ ವಿಭಾಗ ಮಟ್ಟದ ದಸರಾ ಕುಸ್ತಿ ಮತ್ತು ಖೋ ಖೋ ಸ್ಪರ್ಧೆಯ ಕಾರ್ಯಕ್ರಮಕ್ಕೆ ಶುಕ್ರವಾರ ಬೆಳಗ್ಗೆ 10:30 ಗಂಟೆ ಸುಮಾರಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಅವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷೆ ದ್ರೌಪದಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಶ್ರೀ ಯಶವಂತ ಸ್ವಾಮೀಜಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ್ ಸೇರಿದಂತೆ ತಹಶೀಲ್ದಾರರು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮೊದಲಾದವರಿದ್ದರು.