ಪಾವಗಡ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಭಾನುವಾರ ಸಂಜೆ 5 ಗಂಟೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಮುಖ್ಯ ಬೀದಿಗಳಲ್ಲಿ ಭಕ್ತರು ಗಣಪತಿ ಬಪ್ಪಾ ಮೋರೆಯ ಯೆಂದು ಕೂಗುತ್ತಾ, ಪಟಾಕಿ ಸಿಡಿಸಿ, ನೃತ್ಯ ಮಾಡಿ ಸಂಭ್ರಮಿಸಿದರು. ವಿನಾಯಕ ದೇಗುಲ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ನಡೆದ ಈ ವಿಸರ್ಜನಾ ಮೆರವಣಿಗೆಯಲ್ಲಿ ನಿವಾಸಿಗಳು ಭಕ್ತಿ-ಭಾವದಿಂದ ಭಾಗವಹಿಸಿ ಗಣೇಶೋತ್ಸವವನ್ನು ಯಶಸ್ವಿಗೊಳಿಸಿದರು.