ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದರು. ಅಹವಾಲುಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಈ ವೇಳೆ ಶಾಸಕರಾದ ಎನ್.ಎಚ್.ಕೋನರಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.