ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ. ಚೂಡಸಂದ್ರ ನಿವಾಸಿ ನೇಹಾ ಪರ್ವೀನ್ ಅವರ ದೂರಿನ ಮೇರೆಗೆ ಸಲೀಂ, ಸುಧಾ, ಕವಿತಾ ಕೌಶಿಕ, ಅಮಿನುಲ್ ರೆಹಮಾನ್, ವಿನೋದ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.