ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಂಘದ ವತಿಯಿಂದ ಶನಿವಾರ ನಡೆಯಲಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.ಈ ಕುರಿತು ಸಂಘದ ಕಾರ್ಯದರ್ಶಿ ಮಹಾದೇವ ಮಾತನಾಡಿ, ಸಹಕಾರ ಸಚಿವರಾದ ರಾಜಣ್ಣ, ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ, ಆದರೆ ಕೆಲವು ಪಟ್ಟ ಬದ್ದ ಹಿತಾಸಕ್ತಿಗಳು ಪರಿಶಿಷ್ಟ ಪಂಗಡದ ನಾಯಕನ ಏಳ್ಗೆಯನ್ನು ಸಹಿಸದೆ, ಷಡ್ಯಂತ್ರ ಮಾಡಿ ಸಚಿವ ಸಂಪುಟದಿಂದ ವಜಾ ಗೊಳಿಸುವಂತೆ ಮಾಡಿದ್ದಾರೆ, ಇದನ್ನು ಖಂಡಿಸಿ ನಗರದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.