ಜೋಯಿಡಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜೋಯಿಡಾ ತಾಲೂಕಿನ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೂಪಾ ಜಲಾಶಯದ ಭರ್ತಿಗೆ ಕೇವಲ ಐದಾರು ಅಡಿ ಮಾತ್ರ ಉಳಿದು ಕೊಂಡಿದೆ. ಜಲಾಶಯ ಭರ್ತಿಯಾಗಲಿರುವ ಹಿನ್ನಲೆಯಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರು ಸೋಮವಾರ ಸೆಪ್ಟಂಬರ್ 01 ರಂದು ಬೆಳಿಗ್ಗೆ 11.00 ಗಂಟೆಗೆ ಸೂಪಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಭಾನುವಾರ ಮಧ್ಯಾಹ್ನ 3:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.