ದಿನಾಂಕ : 07-07-2025 ರಿಂದ 07-10-2025 ರವರೆಗೆ ನಡೆಯಲಿರುವ ವಿಶೇಷ ಅಭಿಯಾನ - “ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ - 90 ದಿನಗಳ ಡ್ರೈವನ್ನು ರಾಜ್ಯಾದ್ಯಾಂತ ಹಮ್ಮಿಕೊಳ್ಳಲಾಗುತ್ತಿದೆ. ಸದರಿ ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು - ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣದ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು, ಸೇವಾ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕ ತ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ. ಪ್ರಕರಣಗಳು, ಪಾಲುದಾರಿಕೆ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಈ ಅಭಿಯಾನದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಸುವರ್ಣಾವಕಾಶವಿದೆ