ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಕೈ ಮುಟ್ಟಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ನಡೆದಿದೆ. ಆ.29 ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೇ ಯುವತಿಯನ್ನ ಎಳೆದಾಡಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯಕ್ತಿ ಯುವತಿಯ ರೂಮ್‌ಗೆ ನುಗ್ಗಿದಾಗ ಯುವತಿ ರೂಮ್‌ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕನೂ ಮೊದಲೇ ಪಿಜಿ ಫ್ಲೋರ್‌ನ ಎಲ್ಲಾ ರೂಮ್ ಡೋರ್‌ಗಳನ್ನು ಲಾಕ್ ಮಾಡಿ ಯುವತಿ ಬಳಿ ಹೋಗಿ ಆಕೆಯ ಕೈ ಕಾಲು ಮುಟ್ಟಿದ್ದಾನೆ. ಯುವತಿಗೆ ಎಚ್ಚರವಾಗಿ ಗ