ಬಾಗಲಕೋಟೆ ಜಿಲ್ಲೆಯಲ್ಲಿ ಎಲ್ಲೇ ಮಾವಾ ಮಾರಟ ಮಾಡುತ್ತಿದ್ದರೆ ಸಾರ್ವಜನಿಕರು ಮಾಹಿತಿ ನೀಡಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್ಪಿ ಸಿದ್ಧಾರ್ಥ ಗೋಯಲ್ ಮನವಿ ಮಾಡಿದ್ದಾರೆ.ಬಾಗಲಕೋಟೆ ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿರುವ ಅವರು ಬಾಗಲಕೋಟೆ ,ಜಮಖಂಡಿ ಸೇರಿ ವಿವಿಧೆಡೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.ಇನ್ನು ಮಾವಾ ಕುರಿತು ಜಾಗೃತಿ ಮೂಡಿಸಲು ಶೀಘ್ರದಲ್ಲೇ ಅಭಿಯಾನವನ್ನು ಆರಂಭಿಸುತ್ತೇವೆಂದು ತಿಳಿಸಿದ್ದಾರೆ.