ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಮಟ್ಟದ ಸಮಾವೇಶ ನಡೆಯಿತು. ಸೋಮವಾರ ಸಂಜೆವರೆಗೆ ನಡೆದ ಸಮಾವೇಶದ ನೇತೃತ್ವವನ್ನು ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ ಎನ್ ಭೀಮು ನಾಯಕ, ತಾಲೂಕ ಅಧ್ಯಕ್ಷ ಬಸವರಾಜ ಚನ್ನೂರ ವಹಿಸಿದ್ದರು. ಸಭೆಯಲ್ಲಿ ಸಂಘಟನೆಯ ಕಾರ್ಯ ಚಟುವಟಿಕೆಗಳು ಹಾಗೂ ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವ ಕುರಿತು ಚರ್ಚಿಸಲಾಯಿತು.ಸುರಪುರ ತಾಲೂಕಾಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ, ಹುಣಸಗಿ ತಾಲೂಕ ನಿಕಟ ಪೂರ್ವ ಅಧ್ಯಕ್ಷ ಶಿವಲಿಂಗ ಸಾಹು ಪಟ್ಟಣಶೆಟ್ಟಿ ಸೇರಿದಂತೆ ಅನೇಕ ಮುಖಂಡರು,ಪದಾಧಿಕಾರಿಗಳು, ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು.