ತಾಯಿ ಮತ್ತು ಸಹೋದರರನ್ನ ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ಸಿಗೆ ಹತ್ತಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.ಸೆ. 8ರ ಬೆಳಗಿನ ಜಾವ ಈ ಘಟನೆ ನಡೆದಿದೆ 20 ವರ್ಷದ ಯುವತಿ ಮನೆಗೆ ವಾಪಸ್ ತೆರಳುತ್ತಿದ್ದಾಗ ಬೈಕ್ ನಲ್ಲಿ ಯುವಕನೊಬ್ಬ ಆಕೆಯನ್ನ ಹಿಂಬಾಲಿಸಿಕೊಂಡು ಬಂದಿದ್ದು ನಗರದ ಸರ್ಕಿಟ್ ಹೌಸ್ ಬಳಿ ಆಕೆಯ ಬೈಕ್ಗೆ ಅಡ್ಡಗಟ್ಟಿ ಬೀಳಿಸಿದ್ದಾನೆ.ಬಳಿಕ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಯುವತಿ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ವಾಹನ ಬಂದ ಹಿನ್ನೆಲೆ ಯುವಕ ಪರಾರಿಯಾಗಿದ್ದು ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮಂಗಳವಾರ ಮಾಹಿತಿ ಲಭ್ಯವಾಗಿದೆ.